16.9.16

International Day for the Preservation of the Ozone Layer


Ozone hole over Southern Hemisphere in 1957–2001
September 16 was designated by the United Nations General Assembly as theInternational Day for the Preservation of the Ozone Layer.


Ozone layer


Ozone-oxygen cycle in the ozone layer.
The ozone layer or ozone shield is a region of Earth'sstratosphere that absorbs most of the Sun's ultraviolet (UV) radiation. It contains high concentrations of ozone (O3) in relation to other parts of the atmosphere, although still small in relation to other gases in the stratosphere. The ozone layer contains less than 10 parts per million of ozone, while the average ozone concentration in Earth's atmosphere as a whole is about 0.3 parts per million. The ozone layer is mainly found in the lower portion of the stratosphere, from approximately 20 to 30 kilometres (12 to 19 mi) above Earth, although the thickness varies seasonally and geographically.[1]
The ozone layer was discovered in 1913 by the French physicists Charles Fabry and Henri Buisson. Measurements of the sun showed that the radiation sent out from its surface and reaching the ground on Earth is usually consistent with the spectrum of a black body with a temperature in the range of 5,500–6,000 K (Kelvin) (5,227 to 5,727°C), except that there was no radiation below a wavelength of about 310 nm at the ultraviolet end of the spectrum. It was deduced that the missing radiation was being absorbed by something in the atmosphere. Eventually the spectrum of the missing radiation was matched to only one known chemical, ozone.[2] Its properties were explored in detail by the British meteorologist G. M. B. Dobson, who developed a simple spectrophotometer(the Dobsonmeter) that could be used to measure stratospheric ozone from the ground. Between 1928 and 1958, Dobson established a worldwide network of ozone monitoring stations, which continue to operate to this day. The "Dobson unit", a convenient measure of the amount of ozone overhead, is named in his honor.
The ozone layer absorbs 97 to 99 percent of the Sun's medium-frequency ultraviolet light (from about 200 nm to 315 nmwavelength), which otherwise would potentially damage exposed life forms near the surface.[3]
The United Nations General Assembly has designated September 16 as the International Day for the Preservation of the Ozone Layer.

10.9.16


ಬಿ.ಪಿ.ಪಿ..ಎಲ್.ಪಿ ಪೆರ್ಮುದೆ ಶಾಲೆಯಲ್ಲಿ ಓಣಂ ಹಬ್ಬ ಆಚರಣೆ
ಪೆರ್ಮುದೆ : ಬಿ.ಪಿ.ಪಿ..ಎಲ್.ಪಿ ಪೆರ್ಮುದೆ ಶಾಲೆಯಲ್ಲಿ ಓಣಂ ಹಬ್ಬ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಓಣಂ ಹಬ್ಬದ  ಪ್ರಯುಕ್ತ ಶಾಲೆಯಲ್ಲಿ  ಪೂವಲಿ ಸ್ಪರ್ಧೆ ಜರಗಿತುವಿದ್ಯಾರ್ಥಿಗಳಿಗಾಗಿ ಸಂಗೀತ ಕುರ್ಚಿ, ಮಡಕೆ ಒಡೆಯುವುದು, ಬಲೂನ್ ಒಡೆಯುವುದು, ಕಪ್ಪಿಗೆ ನೀರು ತುಂಬಿಸುವುದು, ಹಗ್ಗ ಜಗ್ಗಾಟ ಸ್ಪರ್ದೆಗಳು ಜರಗಿತು. ರಕ್ಷಕರಿಗೆ ಮತ್ತು ಅಧ್ಯಾಪಕರಿಗೆ ಮಡಕೆ ಒಡೆಯುವುದು, ಲಿಂಬೆ ಚಮಚ ಓಟಸ್ಪರ್ದೆಗಳು ಜರಗಿತು. ವಿಜೇತರಿಗೆ ಬಹುಮಾನಗಳನ್ನು     ವಿತರಿಸಲಾಯಿತುಬಳಿಕ ಓಣಂ ಹಬ್ಬದ  ಪ್ರಯುಕ್ತ ಓಣಂ ಸಹಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ರಕ್ಷಕು, ಸಾರ್ವಜನಿಕರು, ಅಧ್ಯಾಪಕರು  ಓಣಂ ಸಹಭೋಜನದಲ್ಲಿ ಪಾಲ್ಗೊಂಡರು.




5.9.16


*ಸರ್ವಪಲ್ಲಿ ರಾಧಾಕೃಷ್ಣನ್*
(ಜನನ : ೫ ನೇ ಸೆಪ್ಟೆಂಬರ್,೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ,
ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರುವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. ಶಿಕ್ಷಕರಾಗಿದ್ದ 'ಡಾ. ಸರ್ವೆಪಲ್ಲಿರಾಧಾಕೃಷ್ಣನ್' ೧೯೬೨ ರಲ್ಲಿ ಭಾರತದ ರಾಷ್ಟ್ರಪತಿಯಾದಾಗ ಇವರ ಶಿಷ್ಯರುಮತ್ತು ಸ್ನೇಹಿತರು ಸೆಪ್ಟೆಂಬರ್ ೫ ರಂದು ತಮ್ಮ ಹುಟ್ಟಿದ ದಿನವನ್ನುಆಚರಿಸಲು ಹೇಳಿದಾಗ ತಮ್ಮ ಶಿಕ್ಷಕ ಹುದ್ದೆಯನ್ನು ಅಪಾರ ಗೌರವಿಸುತಿದ್ದರಾಧಾಕೃಷ್ಣನ್ ನೀವು ನನ್ನ ಹುಟ್ಟಿದ ದಿನವನ್ನು ಬೇರೆಯಾಗಿಯೇಆಚರಿಸುವುದಾದರೆ ಇಂದಿನಿಂದ "ಸೆಪ್ಟೆಂಬರ್ ೫ "ನ್ನು 'ಶಿಕ್ಷಕರದಿನ'ವನ್ನಾಗಿ ಆಚರಿಸಲು ಹೇಳಿದರು. ಅಂದಿನಿಂದ( 1962 ) ಅವರಜನ್ಮದಿನವನ್ನ ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ವಿಶ್ವದ ಎಲ್ಲದೇಶಗಳಲ್ಲಿ ಶಿಕ್ಷಕರ ದಿನವನ್ನು ಬೇರೆ ಬೇರೆ ದಿನಾಂಕಗಳಂದುಆಚರಿಸಲಾಗುತ್ತಿದ್ದರೂ, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿಪ್ರತಿ ವರ್ಷ ಅಕ್ಟೋಬರ್ ೫ ರಂದು "ವಿಶ್ವ ಶಿಕ್ಷಕರ ದಿನ" ವನ್ನುಆಚರಿಸಬೇಕೆಂದು "ಯುನೆಸ್ಕೋ " ಕರೆ ನೀಡಿದೆ. ೧೯೬೬ ರರಅಕ್ಟೋಬರ್ ೫ ರಂದು ಯುನೆಸ್ಕೋ ಮತ್ತು ವಿಶ್ವ ಕಾರ್ಮಿಕ ಸಂಸ್ಥೆಯನಡುವಿನ ಒಪ್ಪಂದದ ಪ್ರಕಾರ ೧೯೯೪ ರ ಅಕ್ಟೋಬರ್ ೫ ರಿಂದ "ವಿಶ್ವಶಿಕ್ಷಕರ ದಿನ"ವನ್ನಾಚರಿಸಲಾಗುತ್ತದೆ.ಜನನ ಬಾಲ್ಯ ಹಾಗೂ ವಿದ್ಯಾಭ್ಯಾಸ'ಸರ್ವಪಲ್ಲಿ ರಾಧಾಕೃಷ್ಣನ್' ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ'ತಿರುತ್ತಣಿ ' ಎಂಬಲ್ಲಿ ಸೆಪ್ಟೆಂಬರ್ ೫, ೧೮೮೮ ರಲ್ಲಿ.(ಸರ್ವಪಲ್ಲಿರಾಧಾಕೃಷ್ಣನ್ ಅವರ ಪುತ್ರ ಸರ್ವಪಲ್ಲಿ ಗೋಪಾಲ್ ಅವರು ತಮ್ಮ ತಂದೆಯಬಗ್ಗೆ ಬರೆದ ಜೀವನಚರಿತ್ರೆಯಲ್ಲಿ ರಾಧಾಕೃಷ್ನನ್ ಅವರಜನ್ಮದಿನಾಂಕ 20-09-1887 ಎಂದಿದೆ) ಸರ್ವಪಲ್ಲಿ ಎನ್ನುವುದುಮನೆತನದ ಹೆಸರಾದರೆ, 'ರಾಧಾಕೃಷ್ಣನ್' ಎನ್ನುವುದು ಅವರ ತಂದೆ-ತಾಯಿಇಟ್ಟ ಮುದ್ದಿನ ಹೆಸರು. ತಂದೆ ಸರ್ವಪಲ್ಲಿ ವೀರಸ್ವಾಮಿ ತಾಯಿಸೀತಮ್ಮ. ಇವರು ಜಮೀನ್ದಾರರ ಬಳಿ ದಿನಗೂಲಿನೌಕರರಾಗಿ ಸೇವೆಗೈಯುತ್ತಾ ಮಗನ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು.ರಾಧಾಕೃಷ್ಣನ್ ಅವರ ತಂದೆಗೆ ತಮ್ಮ ಮಗನನ್ನು ಪುರೋಹಿತನನ್ನಾಗಿಮಾಡುವ ಹಂಬಲವಿತ್ತು. ಬರುವ ದಿನಗೂಲಿಯಲ್ಲಿ ತುಂಬು
ಕುಟುಂಬವನ್ನು ಸಾಗಿಸಲು ಕಷ್ಟ ಪಡುವ ಸಂದರ್ಭದಲ್ಲಿ 'ರಾಧಾಕೃಷ್ಣನ್'ಗೆಓದಬೇಕೆನ್ನುವ ಅಪಾರ ಹಂಬಲ! 'ಸ್ಕಾಲರ್ಶಿಪ್ ಹಣ'ದಲ್ಲಿಯೇ ಎಲ್ಲಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲೆಯ ಶಿಕ್ಷಣವನ್ನು ಮುಗಿಸಿದರಾಧಾಕೃಷ್ಣನ್, ಮದ್ರಾಸ್ (ಈಗಿನ ಚೆನ್ನೈ) ಕ್ರಿಶ್ಚಿಯನ್ ಕಾಲೇಜ್ ನಲ್ಲಿ'ತತ್ವಜ್ಞಾನ ' ವಿಷಯದ ಮೇಲೆ 'ಬಿ.ಎ' ಮತ್ತು 'ಎಂ.ಎ. ಪದವಿ'ಗಳನ್ನುಪಡೆದು ಕೊಂಡರು. 'ಸ್ನಾತಕೋತ್ತರ ಪದವಿ'ಯಲ್ಲಿ ರಾಧಾಕೃಷ್ಣನ್ಮಂಡಿಸಿದ ಪ್ರಬಂಧ ' ದಿ ಎಥಿಕ್ಸ್ ಆಫ್ ವೇದಾಂತ' ಅವರ ಬದುಕಿನದಿಕ್ಕನ್ನೇ ಬದಲಾಯಿಸಿತು. ಕೇವಲ ೨೦ ವರ್ಷದ ಬಾಲಕನ ತಲೆಯಲ್ಲಿದ್ದ'ಹಲವು ಬಗೆಯ ಸಿದ್ಧಾಂತಗಳು', 'ವೇದಾಂತ ವಿಚಾರಗಳು'ಮುಂದೊಂದು ದಿನ ಅವರನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತವೆ, ಎಂದು ಅವರ ಕಾಲೇಜುಶಿಕ್ಷಕರು ಆಗಲೇ ಗುರುತಿಸಿದ್ದರು.ವಿವಾಹವೆಲ್ಲೂರಿನಲ್ಲಿರುವಾಗಲೇ ಕೇವಲ ೧೬ ನೇ ವಯಸ್ಸಿನಲ್ಲಿ ಶಿವಕಾಮಮ್ಮಎಂಬುವವರನ್ನು ಬಾಳಸಂಗಾತಿಯನ್ನಾಗಿಸಿಕೊಂಡರಾಧಾಕೃಷ್ಣನ್, ೧೯೦೯ ರಲ್ಲಿ ಮದ್ರಾಸ್ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಹಾಯಕಉಪನ್ಯಾಸಕರಾಗಿ ಅಚ್ಚುಮೆಚ್ಚಿನ ಶಿಕ್ಷಕ ಸೇವೆಯನ್ನಾರಂಭಿಸಿದರು.ಮಹಾ ಶಿಕ್ಷಕನಾಗಿಭಾರತದ ಸನಾತನ ಧರ್ಮವಾದ ಹಿಂದೂ ಧರ್ಮದ ಸಾರ, ವೇದ, ಉಪನಿಷತ್,ಜೈನ ತತ್ವಜ್ಞಾನ, ಶಂಕರ ರಾಮಾನುಜ, ಮಧ್ವ, ಪ್ಲೇಟೋ, ಪ್ಲಾಟಿನಸ್,ಕಾಂತ್, ಬ್ರ್ಯಾಡ್ಲೆ ಮುಂತಾದ ಮಹನೀಯರತತ್ವಜ್ಞಾನವನ್ನು ಆಳವಾಗಿ ಅಧ್ಯಯನ ಕೈಗೊಂಡರು. ಸತತ
ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಹಂತ ಹಂತವಾಗಿಮೇಲೇರುತ್ತಾ ಮುನ್ನಡೆದ ರಾಧಾಕೃಷ್ಣನ್, 1918ರಲ್ಲಿ ಮೈಸೂರು
ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ, ತತ್ವಜ್ಞಾನ ವಿಭಾಗದಉಪನ್ಯಾಸಕರಾಗಿ ಆಯ್ಕೆಯಾದರು. ದೇಶ ವಿದೇಶಗಳ ವಿವಿಧ ತತ್ವಜ್ಞಾನಪತ್ರಿಕೆಗಳಲ್ಲಿ ತಮ್ಮ ಆಳ ಮತ್ತು ಹರಿತವಾದ ವಿಚಾರಗಳನ್ನುಹೊಂದಿದ್ದ ಲೇಖನಗಳನ್ನು ಬರೆಯುತ್ತಾ ಸಾಗಿದ ರಾಧಾಕೃಷ್ಣನ್, 'ದಿಫಿಲಾಸಫಿ ಆಫ್ ರವೀಂದ್ರನಾಥ್ ಠ್ಯಾಗೋರ್ ' ಎಂಬಮೊದಲ ಪುಸ್ತಕ ಬರೆದರು. ಇವರು ತೆಲುಗಿನಲ್ಲಿ ತಮ್ಮಸಹಿಯನ್ನು "ರಾಧಾಕ್ರಿಶ್ಣಯ್ಯ"ಎಂದು ಹಾಕುತಿದ್ದರು. ಮೈಸೂರಿನಲ್ಲಿಇವರ ಹೆಸರಿನ ರಸ್ತೆಯೊಂದಿದೆ.
ತತ್ವಶಾಸ್ತ್ರದಲ್ಲಿ ಅನುಪಮಕೊಡುಗೆಭಾರತೀಯ ಪುಸ್ತಕೋದ್ಯಮದಲ್ಲಿ ಮಿಂಚುತ್ತಾ ಸಾಗಿದ ಇವರು,
ಮುಂದೆ ' ಜಿನೀನ್ ಮೆನಿಫೆಸ್ಟೇಷನ್ ಆಫ್ ಇಂಡಿಯನ್ ಸ್ಪಿರಿಟ್ 'ಮತ್ತು 'ದಿ ರೀಜನ್ ಆಫ್ ರಿಲಿಜಿಯನ್ ಇನ್ ಕಾಂಟೆಂಪರರಿ
ಫಿಲಾಸಫಿ ' ಎನ್ನುವ ಪುಸ್ತಕಗಳನ್ನು ಸಹ ಬರೆದಿದ್ದಾರೆ. ತಮ್ಮ ಅಪಾರವಾದಪಾಂಡಿತ್ಯದಿಂದಾಗಿ ದೇಶ ವಿದೇಶಗಳಲ್ಲಿ ಮನೆಮಾತಾಗಿದ್ದರು. ಇವರತತ್ವಜ್ಞಾನಕ್ಕೆ ಶರಣಾದ ಆಕ್ಸ್ಫರ್ಡ್ ವಿಶ್ವವಿದ್ಯಾಲಯ ' ಧರ್ಮ ಮತ್ತುನೀತಿಶಾಸ್ತ್ರ ' ಎನ್ನುವ ವಿಷಯದ ಮೇಲೆ ಉಪನ್ಯಾಸನೀಡುವಂತೆ ಆಹ್ವಾನಿಸಿತು. ಸಪ್ತಸಾಗರಗಳಾಚೆ ಭಾರತದಕೀರ್ತಿ ಪತಾಕೆಯನ್ನು ಎತ್ತಿ ಹಿಡಿದು, ಭಾರತೀಯಸ್ವಾತಂತ್ರ್ಯಕ್ಕಾಗಿಯೂ ಹೋರಾಡಿದ ರಾಧಾಕೃಷ್ಣನ್, ಭಾರತೀಯಸನಾತನ ಧರ್ಮ, ತತ್ವಜ್ಞಾನ ಕುರಿತು ವಿದೇಶಿಯರಿಗೆ ಮನಮುಟ್ಟುವಂತೆಮನವರಿಕೆ ಮಾಡಿಕೊಟ್ಟು ಬಂದರು.ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳು೧೯೩೧ ರಲ್ಲಿ ಆಂಧ್ರ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿಆಯ್ಕೆಯಾದ ರಾಧಾಕೃಷ್ಣನ್, ಐದು ವರ್ಷಗಳ ಕಾಲ ತಾವೊಬ್ಬಉತ್ತಮ ಶಿಕ್ಷಣ ಸುಧಾರಕರೂ ಹೌದು ಎಂಬುದನ್ನು ತಮ್ಮಸೇವಾವಧಿಯಲ್ಲಿ ತೋರಿಸಿಕೊಟ್ಟರು. ಇವರ ಅವಧಿಯಲ್ಲಿವಿಶ್ವವಿದ್ಯಾಲಯ ಅನೇಕ ಶಿಕ್ಷಣ ಮತ್ತು ಶಿಕ್ಷಣೇತರ ಸುಧಾರಣೆಗಳನ್ನುಕಂಡಿತು.೧೯೩೯ ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿಆಯ್ಕೆಯಾದರು. ಅಲ್ಲಿಯೂ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ರಾಧಾಕೃಷ್ಣನ್ಅವರನ್ನು, ೧೯೪೮ ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತು. ೧೯೪೯ ರಲ್ಲಿ ಸೋವಿಯತ್ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡರಾಧಾಕೃಷ್ಣನ್, ಸ್ಟಾಲಿನ್ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವವ್ಯಕ್ತಿತ್ವವನ್ನು ಬೆಳೆಸಿಕೊಂಡರು.
ಮೊಟ್ಟಮೊದಲಉಪರಾಷ್ಟ್ರಪತಿಯಾಗಿ೧೯೫೨ ರಲ್ಲಿ ಭಾರತದ ಶಿಕ್ಷಕನೊಬ್ಬಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ
ನೇಮಕಗೊಂಡ 'ರಾಧಾಕೃಷ್ಣನ್', ರಾಜ್ಯಸಭೆಯಲ್ಲಿ ಸಂಸ್ಕೃತಶ್ಲೋಕಗಳ ಮೂಲಕ ಎಲ್ಲ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು.
'ರಾಧಾಕೃಷ್ಣನ್' ಅವರ ಅಪಾರ ಸೇವೆಯನ್ನು ಗುರುತಿಸಿ ಗೌರವಿಸಿದ ಭಾರತ ಸರಕಾರಉಪರಾಷ್ಟ್ರಪತಿ ಹುದ್ದೆಯಲ್ಲಿದಾಗಲೇ ಅವರಿಗೆ ೧೯೫೪ ರಲ್ಲಿಪ್ರತಿಷ್ಠಿತ 'ಭಾರತ ರತ್ನ ಪ್ರಶಸ್ತಿ ' ನೀಡಿ ಗೌರವಿಸಿತು.ಆಗ ರಾಧಾಕೃಷ್ಣನ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ
ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆಹೊರಡುವ ಸಂದರ್ಭದಲ್ಲಿ ಮಹಾರಾಜ ಕಾಲೇಜಿನವಿದ್ಯಾರ್ಥಿಗಳು, ಅವರನ್ನು ಕಳುಹಿಸಿ ಕೊಡಲು ಸಾರೋಟನ್ನು ತಂದುಅಲಂಕರಿಸಿ, ಕುದುರೆಯ ಬದಲು ತಾವೇ ಕುದುರೆಗಳಂತೆ, ರಾಧಾಕೃಷ್ಣನ್ ಅವರುಕುಳಿತ ಸಾರೋಟನ್ನು ಪ್ರೀತಿಪೂರ್ವಕವಾಗಿ ರೈಲ್ವೆ ನಿಲ್ದಾಣದವರೆಗೂ ಎಳೆದು ಕೊಂಡು ಹೋಗಿ, ಭಾವಪೂರ್ಣ ವಿದಾಯ ಹೇಳಿದ್ದರು. ಈ
ಸನ್ನಿವೇಶವನ್ನು ಕಂಡು ರಾಧಾಕೃಷ್ಣನ್ ಅವರು ಭಾವುಕರಾಗಿದ್ದರಂತೆ. ಅವರು ಆಗಾಗ ಈ ಸಂದರ್ಭವನ್ನು ನೆನೆಸಿಕೊಳ್ಳುತ್ತಿದ್ದರು.ಇದೇ ಸಂದರ್ಭದಲ್ಲಿ ರಾಧಾಕೃಷ್ಣನ್ ಕುರಿತು ಅಮೆರಿಕಾದಲ್ಲಿ 'ಫಿಲಾಸಫಿ
ಆಫ್ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ' ಪುಸ್ತಕ ಬಿಡುಗಡೆಗೊಂಡಿತು.'ಡಾ. ರಾಜೇಂದ್ರ ಪ್ರಸಾದ್' ನಂತರ, ೧೯೬೨ ರಲ್ಲಿ ಭಾರತದ ಎರಡನೇರಾಷ್ಟ್ರಪತಿಯಾಗಿ ಆಯ್ಕೆಯಾದ ರಾಧಾಕೃಷ್ಣನ್, ತಮ್ಮ ಅಧಿಕಾರಾವಧಿಯಲ್ಲಿ
ದೇಶದ ಸರ್ವತೋಮುಖ ಏಳಿಗೆಗೆ ಅವಿರತ ಶ್ರಮಿಸಿದರು.ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಂಬಂಧಗಳನ್ನು ಉನ್ನತೀಕರಣಗೊಳಿಸುತ್ತಾ,ದೇಶದೊಳಗಿನ ಆಂತರಿಕ ಕಲಹಗಳಿಗೆ ತಿಲಾಂಜಲಿ ನೀಡುತ್ತಾ, ದೇಶವನ್ನು ಸುಭಿಕ್ಷವಾಗಿಸಿದ ಕೀರ್ತಿ 'ಡಾ.ರಾಧಾಕೃಷ್ಣನ್' ಅವರಿಗೆ ಸಲ್ಲುತ್ತದೆ.' ಶಿಕ್ಷಕರ ದಿನಾಚರಣೆಯ ದಿನ'ಭಾರತೀಯ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ,ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಡಾ.ಸರ್ವಪಲ್ಲಿ ರಾಧಾಕೃಷ್ಣನ್, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪೊತ್ತಿದ್ದಾರೆ. ಇವರು ಓರ್ವ ಶ್ರೇಷ್ಠ ಶಿಕ್ಷಣತಜ್ಞರಾಗಿದ್ದರು. ಇವರ ಜನ್ಮದಿನವಾದ ಸೆಪ್ಟೆಂಬರ್ ೫ ರಂದು ಪ್ರತಿವರ್ಷ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಬಿರುದುಗಳುಬ್ರಿಟನ್ ಆಕ್ಸ್ ಫಾರ್ಡ್ ವಿ.ವಿ. ಗೌರವ ಡಾಕ್ಟರೇಟ್ (೧೯೫೨ ),ಅಮೇರಿಕ ಹಾರ್ವರ್ಡ್ ವಿ.ವಿ. ಗೌರವ ಡಾಕ್ಟರೇಟ್ (೧೯೫೩ ),ಲಂಡನ್ ಪ್ರವಾಸದಲ್ಲಿದ್ದಾಗ "ಆರ್ಡರ್ ಆಫ್ ಮೆರಿನ್"ಪ್ರಶಸ್ತಿ,ವ್ಯಾಟಿಕನ್ ಸಿಟಿ ಪೋಪ್ ಜಾನ್ ರಿಂದ "ನೈಟ್ ಆಫ್ ದ ಆರ್ಮಿ.ಕೇಂದ್ರ ಸಾಹಿತ್ಯ ಅಕಾಡೆಮಿ ಫೆಲೋಶಿಪ್ -೧೯೬೮ ,ಭಾರತೀಯ ವಿದ್ಯಾಭವನ "ಬ್ರಹ್ಮ ವಿದ್ಯಾ ಭಾಸ್ಕರ "ಬಿರುದು,"ಟೆಂಪಲ್ಟನ್"ಪ್ರಶಸ್ತಿ ೧೯೭೩ರಲ್ಲಿ."೧೯೫೪ ರಲ್ಲಿ ಪ್ರತಿಷ್ಠಿತ ' ಭಾರತ ರತ್ನ ಪ್ರಶಸ್ತಿ ' ಗೌರವನಿಧನತಮ್ಮ 'ರಾಷ್ಟ್ರಪತಿ ಹುದ್ದೆ'ಯ ಅಧಿಕಾರಾವಧಿ ಮುಗಿದ ನಂತರ ೧೯೬೭ರಲ್ಲಿ ತಮ್ಮ 'ನಿವೃತ್ತಿ ಜೀವನ'ವನ್ನು ಮದ್ರಾಸಿನ'ಮೈಲಾಪುರ'ದಲ್ಲಿರುವ ತಮ್ಮ ಅಧಿಕೃತ ನಿವಾಸ 'ಗಿರಿಜಾ 'ದಲ್ಲಿ ಕಳೆದರಾಧಾಕೃಷ್ಣನ್, ೧೯೭೫ ರ ಏಪ್ರಿಲ್ ೧೭ ರಂದು ಇಹಲೋಕದ ಯಾತ್ರೆಯನ್ನು ಮುಗಿಸಿದರು..

HAPPY  TEACHER'S  DAY  2016