15.8.21



FANCY DRESS COMPETITION 2021


 

  ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ...







ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ 75  ನೇ ಸ್ವಾತಂತ್ರ್ಯ ದಿನಾಚರಣೆ


                    ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ 75  ನೇ ಸ್ವಾತಂತ್ರ್ಯ ದಿನಾಚರಣೆ ವಿಜೃಂಭಣೆಯಿಂದ ಜರಗಿತು. ಶಾಲಾಮುಖ್ಯೋಪಾಧ್ಯಾಯರಾದ ಸದಾಶಿವ ಮಾಸ್ಟರ್ ಧ್ವಜಾರೋಹಣ ಗೈದರು. ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡಿದರು.  ವಾರ್ಡ್ ಸದಸ್ಯೆ ಶ್ರೀಮತಿ ಇರ್ಷಾನ ಇಸ್ಮಯಿಲ್ ಹಾಗೂ ಶ್ರೀ ಎಂ.ಕೆ. ಅಮೀರ್ ಕಾರ್ಯಕ್ರಮಕ್ಕೆ ಶುಭಾಶಂಸನೆ ನೀಡಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದಾಲಿ, ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಪುಷ್ಪಲತ, ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.